ಮುಖೇಶ್ ಅಂಬಾನಿ ಕುಟುಂಬಕ್ಕೆ ಜೀವ ಬೆದರಿಕೆ – ಆರೋಪಿಯ ಬಂಧನ…

49
firstsuddi

ಮುಂಬೈ: ಉದ್ಯಮಿ ಮುಖೇಶ್ ಅಂಬಾನಿ ಹಾಗೂ ಅವರ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಿಹಾರದ ದರ್ಭಾಂಗಾ ನಿವಾಸಿ ರಾಕೇಶ್ ಮಿಶ್ರಾ ಬಂಧಿತ ಆರೋಪಿ. ಈತನನ್ನು ಮುಂಬೈಗೆ ಕರೆ ತರಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ. ಬಂಧಿತ ಆರೋಪಿ ನಿರುದ್ಯೋಗಿ ಎಂದು ತಿಳಿದು ಬಂದಿದೆ.

ಮುಂಬೈನಲ್ಲಿರುವ ಸರ್ ಎಚ್ ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ನಿನ್ನೆ ಮಧ್ಯಾಹ್ನ 12:57ರ ಸುಮಾರಿಗೆ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ದೂರಾವಾಣಿ ಸಂಖ್ಯೆಗೆ ಬೆದರಿಕೆ ಕರೆ ಬಂದಿತ್ತು. ಮುಖೇಶ್ ಅಂಬಾನಿ, ನೀತಾ ಅಂಬಾನಿ ಮತ್ತು ಕುಟುಂಬದ ಕೆಲ ಸದಸ್ಯರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು. ಈ ಸಂಬಂಧ ಡಿ.ಬಿ. ಮಾರ್ಗ್ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.