ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ನಟ ರಾಘವೇಂದ್ರ ರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜ್ ಕುಮಾರ್ ಸೇರಿದಂತೆ ರಾಜ್ ಕುಮಾರ್ ಕುಟುಂಬದ ಸದಸ್ಯರು ರೇಸ್ ಕೋರ್ಸ್ ನಿವಾಸದಲ್ಲಿ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಕಂಠೀರವ ಸ್ಟುಡಿಯೋದಲ್ಲಿರುವ ರಾಜ್ ಕುಮಾರ್ ಸಮಾಧಿ, ಪುನೀತ್ ರಾಜ್ ಕುಮಾರ್ ಸಮಾಧಿ ಮತ್ತು ಪಾರ್ವತಮ್ಮ ರಾಜ್ ಕುಮಾರ್ ಸಮಾಧಿ ಅಭಿವೃದ್ಧಿ ಬಗ್ಗೆ ಸಿಎಂ ಜೊತೆ ಚರ್ಚೆ ನಡೆಸಿದರು.

ಇದಕ್ಕೆ ಸಂಬಂಧಪಟ್ಟಂತೆ ರಾಜ್ ಕುಟುಂಬದಿಂದ ಸಿದ್ಧಪಡಿಸಲಾಗಿರುವ ಯೋಜನೆಯ ಪಿಪಿಟಿಯನ್ನು ವೀಕ್ಷಣೆ ಮಾಡಿದ ಸಿಎಂ, ಯೋಜನೆ ಅಂದಾಜು ಮೊತ್ತದ ವರದಿ ಸಿದ್ಧಪಡಿಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಿದರು. ಯೋಜನೆಯ ರೂಪುರೇಷೆ ತಯಾರದ ಬಳಿಕ ಮತ್ತೊಂದು ಸುತ್ತಿನೆ ಸಭೆ ಮಾಡೋಣ ಎಂದು ರಾಜ್ ಕುಟುಂಬಕ್ಕೆ ಸಿಎಂ ಬೊಮ್ಮಾಯಿ ಭರವಸೆ ನೀಡಿದರು.










