ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೂ ಶುರುವಾಯ್ತು ಕೊರೊನಾ ಕಂಟಕ…!

203
firstsuddi

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೂ ಕೊರೊನಾ ಕಂಟಕ ಶುರುವಾಗಿದ್ದು, ಯಡಿಯೂರಪ್ಪ ಅವರ ಬೆಂಗಾವಲು ವಾಹನದ ಚಾಲಕನಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಅಲ್ಲದೇ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲೆಕ್ಟ್ರಿಷನ್ ಹಾಗೂ ಓರ್ವ ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಮುಂದಿನ 5 ದಿನಗಳ ಕಾಲ ಸ್ವಯಂ ಹೋಂ ಕ್ವಾರಂಟೈನ್ ಘೋಷಿಸಿಕೊಂಡಿದ್ದು, ಕಾವೇರಿ ನಿವಾಸದಲ್ಲೇ ಇದ್ದುಕೊಂಡು ನನ್ನ ಕರ್ತವ್ಯಗಳನ್ನು ನಿರ್ವಹಿಸಲಿದ್ದೇನೆ. ವಿಡಿಯೋ ಸಂವಾದದ ಮುಖಾಂತರ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಿದ್ದೇನೆ ಎಂದು ತಿಳಿಸಿದ್ದಾರೆ. ಅಲ್ಲದೆ, ಯಾರೂ ಆತಂಕ ಪಡುವ ಅಗತ್ಯವಿಲ್ಲ ಆರೋಗ್ಯವಾಗಿದ್ದೇನೆ. ಎಲ್ಲರೂ ಮುನ್ನೆಚ್ಚರಿಕೆಯ ಕ್ರಮಗಳು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ. ಸಾಮಾಜಿಕ ಅಂತರ ಹಾಗು ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ ಎಂದು ವಿನಂತಿ ಮಾಡಿದ್ದಾರೆ. ಸಮಾಧಾನಕಾರ ವಿಷಯವೇನೆಂದರೆ ಈ ಮೂವರು ಸೋಂಕಿತರು ಮುಖ್ಯಮಂತ್ರಿಗಳ ನೇರ ಸಂಪರ್ಕಕ್ಕೆ ಬಂದಿಲ್ಲ.