ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಸಂಘಟಿತ ಕಾರ್ಮಿಕರ ಭದ್ರತೆಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದೆ : ಎ.ಎನ್.ಮಹೇಶ್…

249
firstsuddi

ಚಿಕ್ಕಮಗಳೂರು : ಜಿಲ್ಲಾ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಕಾರ್ಮಿಕ ದಿನಾಚರಣೆಯನ್ನು ನಗರದಲ್ಲಿ ಬುಧವಾರ ಸಂಭ್ರಮದಿಂದ ಅಚರಿಸಿದರು.
ಬೆಳಿಗ್ಗೆ ಆಜಾದ್ ಪಾರ್ಕ್ ವೃತ್ತದ ಬಳಿ ತೆರಳಿದ ಕಾರ್ಯಕರ್ತರು ಲೋಕೋಪಯೋಗಿ ಇಲಾಖೆಯ ಎದುರು ನಿಂತಿದ್ದ ಅಸಂಘಟಿತ ಕಾರ್ಮಿಕರಿಗೆ ಸಿಹಿ ಹಂಚಿ ಶುಭಾಶಯ ಕೋರಿದರು.
ಈ ಸಂದಂರ್ಭದಲ್ಲಿ ಮಾತನಾಡಿದ ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಮಾಜಿ ಅಧ್ಯಕ್ಷ ಎ.ಎನ್.ಮಹೇಶ್ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಸಂಘಟಿತ ಕಾರ್ಮಿಕರ ಭದ್ರತೆಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದರು.
ಜಿಲ್ಲಾ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ಮುಂದಿನ ದಿನಗಳಲ್ಲಿ ಹಳ್ಳಿಗಳಿಗೆ ಮತ್ತು ಕಾರ್ಮಿಕರಮನೆಗಳಿಗೆ ತೆರಳಿ ಅವರಿಗಿರುವ ಸವಲತ್ತುಗಳ ಕುರಿತು ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ವಕ್ತಾರ ಎಂ.ಸಿ ಶಿವಾನಂದ ಸ್ವಾಮಿ ಮಾತನಾಡಿ ಅಸಂಘಟಿತ ಕಾರ್ಮಿಕರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಸಮಿತಿಯ ಜಿಲ್ಲಾಧ್ಯಕ್ಷ ರಸೂಲ್ ಖಾನ್, ಉಪಾಧ್ಯಕ್ಷ ಜೋಸೆಫ್, ಬ್ಲಾಕ್ ಅಧ್ಯಕ್ಷ ಶೃದೀಪ್, ಅಮರ್, ಮೂರ್ತಿ, ನಜೀರ್ ಅಹಮದ್ ಹಾಜರಿದ್ದರು.