ಮುಖ್ಯಮಂತ್ರಿ ಸ್ಥಾನಕ್ಕೆ ಬೊಮ್ಮಾಯಿ ರಾಜೀನಾಮೆ…

55
firstsuddi

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಕ್ಕಿದೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆಗೆ ಮುಂದಾಗಿದ್ದಾರೆ.

ಇಂದು ಸಂಜೆ ಬೆಂಗಳೂರಿಗೆ ಬಂದು ರಾಜ್ಯಪಾಲರನ್ನು ಭೇಟಿ ಮಾಡಿ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬೊಮ್ಮಾಯಿ ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆಯ 224 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಈ ಪೈಕಿ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದುಕೊಂಡಿದ್ದು, ಆಡಳಿತ ಪಕ್ಷ ಬಿಜೆಪಿ 60ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವ ಮೂಲಕ ಹೀನಾಯ ಸೋಲು ಅನುಭವಿಸಿದೆ. ಸದ್ಯ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲು ಸಿದ್ಧತೆಗಳನ್ನು ನಡೆಸುತ್ತಿದೆ.