ಮುಡಾ ಪ್ರಕರಣ ಸಿಎಂ ಮೇಲ್ಮನವಿ ವಿಚಾರಣೆ ಜನವರಿ 20ಕ್ಕೆ ಮುಂದೂಡಿಕೆ.

32

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಮೇಲ್ಮನವಿ ಕುರಿತಂತೆ ಹೈಕೋರ್ಟ್ ರಾಜ್ಯಪಾಲರ ಕಚೇರಿ ಹಾಗೂ ದೂರುದಾರರಿಗೆ ನೋಟಿಸ್ ಜಾರಿ ಮಾಡಿದೆ. ಮುಡಾದಿಂದ ತಮ್ಮ ಕುಟುಂಬಸ್ಥರಿಗೆ ಬದಲಿ ನಿವೇಶನ ಪಡೆದ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿದ ಆರೋಪದಲ್ಲಿ ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮ ಎತ್ತಿ ಹಿಡಿದಿದ್ದ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಸಿಎಂ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ಪೀಠ ಈ ಆದೇಶ ನೀಡಿ, ವಿಚಾರಣೆಯನ್ನು ಜನವರಿ 20 ಕ್ಕೆ ಮುಂದೂಡಿತು.