ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ರವರಿಗೆ ಇನ್ನೋಂದು ಸಂಕಷ್ಟ ಎದುರಾಗಿದೆ. ಶಾಸಕ ಮುನಿರತ್ನ ವಿರುದ್ಧ ಕೇಳಿಬರುತ್ತಿರುವ ಅತ್ಯಾಚಾರ, ಹನಿಟ್ರ್ಯಾಪ್ ಆರೋಪದ ವಿಚಾರಣೆಯಲ್ಲಿ ಸಾಬೀತಾಗಿದೆ ಎಂದು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ವಿಶೇಷ ವಿಚಾರಣೆಯ ತಂಡ ಆರೋಪ ಪಟ್ಟಿಯನ್ನು ಸಲ್ಲಿಸಲಾಗಿದೆ. ತಮ್ಮ ವಿರೋಧಿಗಳನ್ನು ಹೆಚ್‍ಐವಿ-ಏಡ್ಸ್ ಪೀಡಿತರ ಮೂಲಕ ಹನಿಟ್ರ್ಯಾಪ್ ಬಲಗೆ ಬೀಳಿಸಿ ಏಡ್ಸ್ ಹರಡುವಿಕೆಗೆ ಶಾಸಕ ಮುನಿರತ್ನ ದುಷ್ಕೃತ್ಯ ಎಸಗಿದ್ದರು ಎಂದು ಎಸ್‍ಐಟಿ ಸಲ್ಲಿಸಿದ ಚಾರ್ಜ್‍ಶೀಟ್‍ನಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗುತ್ತಿದೆ. ಶಾಸಕ ಮುನಿರತ್ನ ಕೃತ್ಯಕ್ಕೆ ಸಹಕಾರ ನೀಡಿದ ಆರೋಪದ ಪ್ರಕರಣದ ಎ3 ಸುಧಾಕರ್, ಎ7 ಪಿ.ಶ್ರೀನಿವಾಸ್ ಮತ್ತು ಎ8 ಇನ್ಸ್‍ಪೆಕ್ಟರ್ ಐಯ್ಯಣ್ಣ ರೆಡ್ಡಿ ವಿರುದ್ಧ ದಾಖಲಾದ ಆಪಾದನೆ ಕೂಡ ವಿಚಾರಣೆಯಲ್ಲಿ ಸಾಬೀತಾಗಿದೆ. ಇನ್ಸ್‍ಪೆಕ್ಟರ್ ಬಿ. ಐಯ್ಯಣ್ಣ ರೆಡ್ಡಿಯನ್ನು ಎಸ್‍ಐಟಿ ಪೊಲೀಸರು ಬಂಧಿಸಲಾಗಿದೆ. ಸೆಪ್ಟೆಂಬರ್ 18 ರಂದು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಒಟ್ಟು 7 ಮಂದಿಯ ವಿರುದ್ಧ ಅತ್ಯಾಚಾರ ಆರೋಪ ಮಾಡಿ ದೂರು ದಾಖಲಿಸಿದ್ದರು. ಪ್ರಕರಣದ ವಿಚಾರಣೆಗೆ ಸರ್ಕಾರ ಎಸ್‍ಐಟಿ ರಚಿಸಲಾಗಿತ್ತು. ಇದರ ಬಗ್ಗೆ ವಿಚಾರಣೆ ನಡೆಸಿದ ಎಸ್‍ಐಟಿ, ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಹಾಗೂ ಅವರ ಸಹಚರರ ಮೇಲೆ ಕೃತ್ಯಕ್ಕೆ ನೆರವು ನೀಡಿದ ಆರೋಪದಡಿ ಆರೋಪ ಪಟ್ಟಿಯನ್ನು ಸಲ್ಲಿಸಲಾಗಿದೆ. ಈ ಪ್ರಕರಣದ ಸಂಬಂಧ ಎಸ್‍ಐಟಿ 146 ಸಾಕ್ಷಿಗಳನ್ನು ವಿಚಾರಣೆಗೊಳಪಡಿಸಿತ್ತು. ಇದರಲ್ಲಿ ನ್ಯಾಯಾಧೀಶರ ಮುಂದೆ ಸಿಆರ್‍ಪಿಸಿ 164ರ ಎಂಟು ಮಂದಿಯ ಸಾಕ್ಷಿದಾರರು ಹೇಳಿಕೆ ನೀಡಿದ್ದಾರೆ. 850 ದಾಖಲೆ ಒಳಗೊಂಡ 2,481 ಪುಟಗಳ ಚಾರ್ಜ್‍ಶೀಟ್ ಸಲ್ಲಿಕೆ ಎಸ್‍ಐಟಿ ಸಲ್ಲಿಕೆ ಮಾಡಲಾಗಿದೆ ಎಂದು ಮಾಹಿತಿ ತಿಳಿದುಬಂದಿದೆ.










