ಮುರುಘಾ ಮಠಕ್ಕೆ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ನೇಮಕ…

48
firstsuddi

ಬೆಂಗಳೂರು : ಚಿತ್ರದುರ್ಗದ ಮುರುಘಾ ಮಠಕ್ಕೆ ಆಡಳಿತಾಧಿಕಾರಿಯಾಗಿ ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಶಿವಮೂರ್ತಿ ಮುರುಘಾ ಶರಣರು ಸೆ.1 ರಿಂದ ನ್ಯಾಯಾಂಗ ಬಂಧನದಲ್ಲಿರುವುದರಿಂದ ಮಠದ ಒಟ್ಟು ಸ್ಥಿರಾಸ್ತಿಗೆ ಮತ್ತು ಮಠದ ಹಣಕಾಸು ನಿರ್ವಹಣೆಯನ್ನು ನೋಡಿಕೊಳ್ಳುವುದು ಕಷ್ಟಕರವಾಗಿರುತ್ತದೆ. ಈ ಟ್ರಸ್ಟ್ ಸಾರ್ವಜನಿಕ ಟ್ರಸ್ಟ್ ಆಗಿರುವುದರಿಂದ ಆಸ್ತಿಗಳ ನಿರ್ವಹಣೆಗಳ ತೊಡಕುಂಟಾಗುತ್ತಿದೆ. ದುರಾಡಳಿತ ಹಾಗೂ ಹಣಕಾಸು ದುರುಪಯೋಗ ಆದಲ್ಲಿ ಸಾರ್ವಜನಿಕ ಹಿತಾಸಕ್ತಿಗೆ ದಕ್ಕೆಯಾಗುವ ಸಂಭವ ಇರುತ್ತದೆ.

ಈ ಸಂಸ್ಥೆಗೆ ಶ್ರೀ ಶಿವಮೂರ್ತಿ ಮುರುಘಾ ಶರಣರು ಮಠದ ಜೀವ ಪೀಠಾಧಿಪತಿ ಹಾಗೂ ವಿದ್ಯಾ ಸಂಸ್ಥೆಗೆ ಅಜೀವ ಅಧ್ಯಕ್ಷರು ಆಗಿರುವುದರಿಂದ ಮಠದ ಹಾಗೂ ವಿದ್ಯಾ ಸಂಸ್ಥೆಗಳ ಅನಾನುಕೂಲಗಳನ್ನು ತಪ್ಪಿಸಲು ಸಾರ್ವಜನಿಕ ಹಿತದೃಷ್ಟಿಯಿಂದ ಕಾನೂನು ರೀತಿಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಚಿತ್ರದುರ್ಗ ಜಿಲ್ಲಾಧಿಕಾರಿ ತಮ್ಮ ವರದಿಯಲ್ಲಿ ತಿಳಿಸಿದ್ದರು. ಇದೀಗ ಲೆಕ್ಕಪತ್ರ ನಿರ್ವಹಣೆ, ಮಠದ ಚರ ಹಾಗೂ ಸ್ಥಿರಾಸ್ತಿ ಹಿತದೃಷ್ಟಿಯಿಂದ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿದೆ.