ಮುರುಘಾ ಶ್ರೀಗಳ ಬಂಧನ ಪ್ರಕರಣ ; ಕಾನೂನು ಪ್ರಕಾರ ಎಲ್ಲಾ ನಡೆಯುತ್ತೆ ಎಂದ ಬೊಮ್ಮಾಯಿ.

39
firstsuddi

ಮಂಗಳೂರು : ಮುರುಘಾ ಶ್ರೀಗಳ ಬಂಧನದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾನೂನು ಪ್ರಕಾರವಾಗಿ ಎಲ್ಲಾ ನಡೆಯುತ್ತೆ ಎಂದು ಹೇಳಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪೊಲೀಸರಿಗೆ ನಾವು ಮುಕ್ತ ಸ್ವಾತಂತ್ರ್ಯ ಕೊಟ್ಟಿದ್ದೇವೆ. ಹಾಗಾಗಿ ಕಾನೂನು ಪ್ರಕಾರವಾಗಿ ಎಲ್ಲವೂ ನಡೆಯುತ್ತದೆ. ಸದ್ಯಕ್ಕೆ ಶ್ರೀಗಳ ಬಂಧನ ಮತ್ತು ಪ್ರಕರಣದ ಬಗ್ಗೆ ಯಾವುದೇ ವ್ಯಾಖ್ಯಾನ ನೀಡುವುದು ಸರಿಯಲ್ಲ ಎಂದರು.

ಇಂದು ಮಂಗಳೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸಂಪುಟ ಸಹೋದ್ಯೋಗಿಗಳ ಜೊತೆ ಬೆಳಗ್ಗೆಯೇ ಮಂಗಳೂರಿಗೆ ತೆರಳಿದ್ದಾರೆ.