ಮುರುಘಾ ಶ್ರೀಗೆ ಹೃದಯ ಸಂಬಂಧಿ ಕಾಯಿಲೆ – ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್…

45
firstsuddi

ಶಿವಮೊಗ್ಗ : ಪೋಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಮುರುಘಾಶ್ರೀ ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಉಂಟಾಗಿದ್ದು, ಚಿತ್ರದುರ್ಗದ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ಸೂಚನೆಯ ಮೇರೆಗೆ ಶ್ರೀಗಳನ್ನು ಕಳೆದ ರಾತ್ರಿ ಚಿತ್ರದುರ್ಗದಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಗಿದೆ.

ಕೊರೋನರಿ ಆಂಜಿಯೋಗ್ರಾಮ್ ಚಿಕಿತ್ಸೆಗೆ ಕೋರ್ಟ್ ಸೂಚನೆ ಹಿನ್ನೆಲೆ ಮುರುಘಾ ಶ್ರೀಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮುರುಘಾ ಶ್ರೀ ಪರ ವಕೀಲ ಉಮೇಶ್ ಮಾತನಾಡಿದ್ದು, ಕೊರೋನರಿ ಆಂಜಿಯೋಗ್ರಾಂ ಪರೀಕ್ಷೆಗೆ ಒಳಪಡಿಸಲು ಸೂಚಿಸಲಾಗಿದೆ. ಹೀಗಾಗಿಯೇ ಮೆಗ್ಗಾನ್ ಆಸ್ಪತ್ರೆಗೆ ಕರೆ ತಂದಿದ್ದೇವೆ. ವೈದ್ಯರ ಸಲಹೆಯಂತೆ ಚಿಕಿತ್ಸೆ ನಡೆಯಲಿದೆ ಎಂದಿದ್ದಾರೆ.

ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾಶ್ರೀ ಸಪ್ಟೆಂಬರ್ 27ರವರೆಗೆ ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ.