ಮುಷ್ಕರಕ್ಕೆ ಕರೆ ನೀಡಿದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ; ಕೆಪಿಟಿಸಿಎಲ್, ಎಸ್ಕಾಂ ನೌಕರರ ವೇತನ ಹೆಚ್ಚಳ…

73
firstsuddi

ಬೆಂಗಳೂರು: ಮುಷ್ಕರಕ್ಕೆ ಕರೆ ನೀಡಿದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಮತ್ತು ಎಲ್ಲಾ ಎಸ್ಕಾಂಗಳ ನೌಕರರ ವೇತನ ಹೆಚ್ಚಳ ಮಾಡಿದೆ.

ವೇತನ ಹೆಚ್ಚಿಸುವಂತೆ ನಾಳೆಯಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡಲು ಕೆಪಿಟಿಸಿಎಲ್ ನೌಕರರ ಸಂಘ ಕರೆ ಕೊಟ್ಟಿತ್ತು. ಎಲ್ಲಾ ಎಸ್ಕಾಂಗಳು ನೌಕರರು ಕರ್ತವ್ಯಕ್ಕೆ ಗೈರಾಗಿ ಮುಷ್ಕರ ನಡೆಸಲು ನಿರ್ಧರಿಸಿದ್ದರು. ಈ ಹಿನ್ನೆಲೆ 2022ರ ಏಪ್ರಿಲ್​ನಿಂದ ಅನ್ವಯವಾಗುವಂತೆ ಶೇ.20ರಷ್ಟು ವೇತನ ಹೆಚ್ಚಳ ಮಾಡಿ ಇಂಧನ ಸಚಿವ ಸುನೀಲ್ ಕುಮಾರ್ ಆದೇಶ ಪ್ರಕಟಿಸಿದ್ದಾರೆ.

ಕೆಪಿಟಿಸಿಎಲ್ ನೌಕರರ ಬೇಡಿಕೆ ಏನು?
• ಶೇ. 40% ವೇತನ ಹೆಚ್ಚಳ ಆಗಬೇಕು. 2022ರ ಏಪ್ರಿಲ್ 1 ರಿಂದ ಬಾಕಿ ವೇತನ ಬಿಡುಗಡೆ ಮಾಡಬೇಕು.
• ತಕ್ಷಣವೇ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು.
• ವಿದ್ಯುತ್ ಕಂಪನಿಗಳ ಖಾಸಗೀಕರಣ ಉದ್ದೇಶದ ಪ್ರಸ್ತಾವಿತ ಮಸೂದೆಯನ್ನು ಹಿಂಪಡೆಯಬೇಕು.