ಬೆಂಗಳೂರು : ಮುಸ್ಲಿಂ ವ್ಯಾಪಾರಿಗಳ ಬಳಿ ಚಿನ್ನ ಖರೀದಿ ಮಾಡದಂತೆ ಹೊಸ ಅಭಿಯಾನ ಪ್ರಾರಂಭವಾಗಿದೆ.
ಮೇ 3ರಂದು ಅಕ್ಷಯ ತೃತೀಯ ಹಬ್ಬವಿದ್ದು, ಈ ವಿಶೇಷ ದಿನದಂದು ಜನರು ಚಿನ್ನ ಖರೀದಿಗೆ ಮುಗಿಬೀಳುತ್ತಾರೆ. ಈ ಹಿನ್ನೆಲೆ ಮುಸ್ಲಿಮರ ಅಂಗಡಿಗಳಲ್ಲಿ ಚಿನ್ನ ಖರೀದಿಸಬೇಡಿ, ಹಿಂದೂ ಅಂಗಡಿಗಳಲ್ಲೇ ಚಿನ್ನ ಖರೀದಿಸಿ ಎಂದು ಟ್ವಿಟ್ಟರ್ ನಲ್ಲಿ ಹಿಂದೂ ಪರ ಸಂಘಟನೆಗಳ ಅಭಿಯಾನ ಪ್ರಾರಂಭವಾಗಿದೆ.
ರಾಜ್ಯದಲ್ಲಿ ಸರಿ ಸುಮಾರು ಮೂವತ್ತು ಸಾವಿರ ಚಿನ್ನದಂಗಡಿಗಳಿದ್ದು, ಅದರಲ್ಲಿ ಶೇಕಡಾ 30ರಷ್ಟು ಮುಸ್ಲಿಂ ಮಾಲೀಕತ್ವದ ಮಳಿಗೆಗಳಿವೆ. ಅಕ್ಷಯ ತೃತೀಯ ದಿನದಂದೇ ರಾಜ್ಯಾದ್ಯಂತ ಬರೋಬ್ಬರಿ ಒಂದು ಸಾವಿರ ಕೋಟಿ ವ್ಯಾಪಾರವಾಗುವ ನಿರೀಕ್ಷೆಯನ್ನು ಮಾಲೀಕರು ಹೊಂದಿದ್ದಾರೆ. ಆದರೆ ಇದೀಗ ಆರಂಭವಾಗಿರುವ ಅಭಿಯಾನದಿಂದ ನೂರಾರು ಕೋಟಿ ವ್ಯಾಪಾರಕ್ಕೆ ಕತ್ತರಿ ಬೀಳಲಿದೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ಈ ಅಭಿಯಾನ ಎಷ್ಟರಮಟ್ಟಿಗೆ ಯಶಸ್ಸು ಕಾಣಲಿದೆ ಮತ್ತು ಈ ಅಭಿಯಾನಕ್ಕೆ ಹಿಂದೂ ಪರ ಸಂಘಟನೆಗಳು ಬೆಂಬಲ ನೀಡುತ್ತಾರಾ ಎಂದು ಕಾದು ನೋಡಬೇಕಾಗಿದೆ.










