ಮುಸ್ಲಿಂ ಕಾಲೇಜು ಸ್ಥಾಪನೆ.. ರಾಜ್ಯ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕು : ಮುತಾಲಿಕ್ ಆಗ್ರಹ

69
firstsuddi

ಧಾರವಾಡ : ರಾಜ್ಯದ ಬಿಜೆಪಿ ಸರ್ಕಾರ 10 ಮುಸ್ಲಿಂ ಕಾಲೇಜುಗಳನ್ನು ಸ್ಥಾಪನೆ ಮಾಡಲು ಹೊರಟಿರುವುದು ಖಂಡನೀಯ ಎಂದು ಸರ್ಕಾರದ ವಿರುದ್ಧ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಹರಿಹಾಯ್ದಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ನನ್ನ ಬಲಿದಾನವಾದರೂ ಸರಿ ಮುಸ್ಲಿಂ ಕಾಲೇಜು ಸ್ಥಾಪನೆಗೆ ನಾನು ಒಪ್ಪುವುದಿಲ್ಲ. ಮುಸ್ಲಿಂ ಕಾಲೇಜು ಸ್ಥಾಪನೆಗೆ ನಾನು ವಿರೋಧ ಮಾಡುತ್ತೇನೆ. ಈ ಸಂಬಂಧ ಎಲ್ಲಾ ಹಿಂದೂ ಸಂಘಟನೆಗಳ ಒಕ್ಕೂಟದಿಂದ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಮುತಾಲಿಕ್ ಎಚ್ಚರಿಕೆಯನ್ನು ನೀಡಿದರು.

ಕಾಂಗ್ರೆಸ್ ಪಕ್ಷ ಮುಸ್ಲಿಮರಿಗೆ ಸಪೋರ್ಟ್ ಮಾಡಿದ ಪರಿಣಾಮವಾಗಿ ಬಿಜೆಪಿಯವರು ಹೀಗೆ ಮಾಡುತ್ತಿದ್ದಾರೆ. ಹಿಜಾಬ್ ನ ಸಲುವಾಗಿ ಮುಸ್ಲಿಂ ಕಾಲೇಜುಗಳನ್ನು ಕೊಡುವುದು ತಪ್ಪು. ಕೂಡಲೇ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದರು.