ಮೂಡಿಗೆರೆ : ಭಾರಿ ಮಳೆಯಿಂದಾಗಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತ ಹಾಗೂ ಭೂ ಕುಸಿತವಾದ ಕಾರಣ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಚಿಕ್ಕಮಗಳೂರಿನಿಂದ ಮಂಗಳೂರು, ಧರ್ಮಸ್ಥಳ ಬಸ್‍ಗಳು ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ಮಾರ್ಗವಾಗಿ ಸಂಚರಿಸುತ್ತಿದ್ದ ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್‍ಗಳನ್ನು ರದ್ದು ಮಾಡಲಾಗಿದ್ದು. ಚಿಕ್ಕಮಗಳೂರು ಘಟಕದ ಉಡುಪಿಗೆ ತೆರಳುತ್ತಿದ್ದ ಬಸ್ ಶೃಂಗೇರಿ ಮಾರ್ಗವಾಗಿ ಸಂಚರಿಸುತ್ತಿದ್ದು, ಆ ಮಾರ್ಗದಲ್ಲಿ ಯಾವುದೇ ಆದಾಯ ಇಲ್ಲದ ಹಿನ್ನೆಲೆ, ಜನರ ಅನುಕೂಲಕ್ಕಾಗಿ ತಾತ್ಕಾಲಿಕವಾಗಿ ಚಿಕ್ಕಮಗಳೂರಿನಿಂದ ಬೆಳಿಗ್ಗೆ 6 ಗಂಟೆಗೆ ತೆರಳುತ್ತಿದ್ದ ಬಸ್ಸನ್ನು ಮೂಡಿಗೆರೆ, ಕೊಟ್ಟಿಗೆಹಾರ, ಕಳಸ, ಕುದುರೆಮುಖ, ಬಜಗೋಳಿ, ಕಾರ್ಕಳ ಮಾರ್ಗವಾಗಿ ಸಂಚರಿಸಲು ಚಿಂತನೆ ನಡೆಸಲಾಗಿದ್ದು, ಚಾರ್ಮಾಡಿ ಘಾಟ್ ರಸ್ತೆ ಸಂಪೂರ್ಣ ಸರಿಹೋಗುವವರೆಗೂ ಕಲೆಕ್ಷನ್ ನೋಡಿಕೊಂಡು ಉಡುಪಿ ಕಡೆಗೆ ಬಸ್ ಓಡಿಸಲಾಗುವುದು ಎಂದು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ತಿಳಿಸಿದ್ದಾರೆ.
Home ಸ್ಥಳಿಯ ಸುದ್ದಿ ಮೂಡಿಗೆರೆ : ಉಡುಪಿ-ಚಿಕ್ಕಮಗಳೂರು ಕೆ.ಎಸ್.ಆರ್.ಟಿ.ಸಿ ಬಸ್ ಕಳಸ-ಕುದುರೆಮುಖ ಮಾರ್ಗವಾಗಿ ಸಂಚರಿಸಲು ಚಿಂತನೆ…










