ಮೂಡಿಗೆರೆ : ಕಂಠಪಾಠ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದ 5ನೇ ತರಗತಿ ವಿದ್ಯಾರ್ಥಿನಿ…

289
firstsuddi

ಮೂಡಿಗೆರೆ : ತಾಲ್ಲೂಕಿನ ಘಟ್ಟದಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಮಾನ್ಯ ಅವರು ಕೊಪ್ಪ ತಾಲ್ಲೂಕಿನ ಬಿಜಿಎಸ್ ವೆಂಕಟೇಶ್ವರ ವಿದ್ಯಾಮಂದಿರದಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಕಂಠಪಾಠ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಯು ಶ್ರೀಮತಿ ಮಂಜುಳಾ ಹಾಗೂ ರವಿ ದಂಪತಿಯ ಪುತ್ರಿಯಾಗಿದ್ದಾಳೆ. ಮಾನ್ಯಾಳ ಈ ಸಾಧನೆಗೆ ಶಿಕ್ಷಕರು, ಶಾಲೆಯ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.