ಮೂಡಿಗೆರೆ : ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಹಾಂದಿ ಸಮೀಪದ ಆಜಾದ್ ನರ್ಸರಿ ಬಳಿ ನಡೆದಿದೆ. ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಲ್ದೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










