ಮೂಡಿಗೆರೆ : ಕೆಪಿಸಿಸಿ ಅಧ್ಯಕ್ಷರಾಗಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಆಯ್ಕೆಯಾದ ಹಿನ್ನಲೆಯಲ್ಲಿ ಪಟ್ಟಣದ ಲಯನ್ಸ್ ವೃತ್ತದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸುವ ಮೂಲಕ ಸಂಭ್ರಮಾಚರಣೆ ನಡೆಸಿದರು.
ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಬ್ಲಾಕ್‍ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಅವರು, ಮಾನ್ಯ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ. ಅವರ ನಾಯಕತ್ವದಲ್ಲಿ ನಾವೆಲ್ಲರೂ ಮುನ್ನಡೆಯುತ್ತೇವೆ. ಕಾಂಗ್ರೆಸ್ ಪಕ್ಷದ ಚಾಣಕ್ಯ ಎಂದು ಗುರುತಿಸಿಕೊಂಡಿರುವ ಶಿವಕುಮಾರ್ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರದ ಗದ್ದುಗೆಯಲ್ಲಿ ಪುನರ್ ಪ್ರತಿಷ್ಟಾಪಿಸುತ್ತಾರೆ ಎನ್ನುವ ಅಭಿಲಾಷೆ ನಮ್ಮದು. ಅವರ ಆದೇಶದಂತೆ ಮುಂದಿನ ಚುನಾವಣೆಗಳನ್ನು ಎದುರಿಸಿಲು ಕಾಂಗ್ರೆಸ್ ಕಾರ್ಯಕರ್ತರು ಉತ್ಸುಕರಾಗಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ಎಸ್.ಜಯರಾಂ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಒಬ್ಬ ಸಮರ್ಥ ನಾಯಕನ ಅವಶ್ಯಕತೆ ಇತ್ತು. ಒಬ್ಬ ಬಲಶಾಲಿ ವ್ಯಕ್ತಿ ಪಕ್ಷದ ನಾಯಕನ ಹುದ್ದೆ ಅಲಂಕರಿಸಿರುವುದು ಕಾರ್ಯಕರ್ತರಿಗೆ ಬಲ ಬಂದಂತೆ ಭಾಸವಾಗಿದೆ. ಐಡಿ ಯಂಥಹ ಇಲಾಖೆ ಮೂಲಕ ಶಿವಕುಮಾರ್ ಅವರನ್ನು ಬಿಜೆಪಿ ನಾಯಕರುಗಳು ಮಟ್ಟ ಹಾಕಲು ಪ್ರಯತ್ನ ಪಟ್ಟರು. ಆದರೆ ಇದಾವ ಬೆದರಿಕೆಗೂ ಬಗ್ಗದ ಡಿಕೆಶಿ ಅವರ ಹೆಗಲಿಗೆ ಕಾಂಗ್ರೆಸ್ ಪಕ್ಷ ನಾಯಕತ್ವದ ಜವಾಬ್ದಾರಿಯನ್ನು ನೀಡಿ ಗೌರವಿಸಿದೆ. ಇದು ಒಬ್ಬ ಹೋರಾಟಗಾರನಿಗೆ ಸಿಕ್ಕ ಗೆಲುವು. ಮುಂದಿನ ದಿನಗಳಲ್ಲಿ ತಳಮಟ್ಟದ ಕಾರ್ಯಕರ್ತರಿಂದ ಕಾಂಗ್ರೆಸ್ ಪಕ್ಷದ ಯಶಸ್ಸಿಗೆ ಹೋರಾಟ ಮಾಡಲಾಗುವುದು ಎಂದರು.
ಸಂಭ್ರಮಾಚರಣೆಯಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಂಪತ್‍ಕುಮಾರ್, ಬಣಕಲ್ ಹೋಬಳಿ ಅಧ್ಯಕ್ಷ ಸುಬ್ರಹ್ಮಣ್ಯ. ಬಣಕಲ್ ಹೋಬಳಿ ಕಾರ್ಯದರ್ಶಿ ಬಿ.ಎ.ಉಮ್ಮರ್, ತ್ರಿಪುರ ಘಟಕದ ಯುವಕಾಂಗ್ರೆಸ್ ಅಧ್ಯಕ್ಷ ಅರವಿಂದ್, ಮೂಡಿಗೆರೆ ಪಪಂ ಸದಸ್ಯರುಗಳಾದ ಎಂ.ಪಿ.ರಮೇಶ್, ಹಂಝ, ಯುವಕಾಂಗ್ರೆಸ್ ಅಧ್ಯಕ್ಷ ಅಭಿಲಕ್ಷ್ಮಣಗೌಡ, ದೀಕ್ಷೀತ್ ಆಲೂರು, ಕಣಚೂರು ದೀಕ್ಷಿ, ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರುಗಳು ಭಾಗವಹಿಸಿದ್ದರು,
Home ಸ್ಥಳಿಯ ಸುದ್ದಿ ಮೂಡಿಗೆರೆ : ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಆಯ್ಕೆ-ಕಾಂಗ್ರೆಸ್ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ…










