ಮೂಡಿಗೆರೆ : ಖಾಸಗಿ ಶಾಲಾ ಶಿಕ್ಷಕರ ನೆರವಿಗೆ ಬರುವಂತೆ ಸರ್ಕಾರಕ್ಕೆ ಒತ್ತಾಯ…

245
firstsuddi

ಕೊಟ್ಟಿಗೆಹಾರ: ಲಾಕ್‍ಡೌನ್ ಪ್ರಾರಂಭವಾಗಿ ತಿಂಗಳುಗಳೆ ಕಳೆದಿದ್ದು ಶಾಲೆ ಪುನರಾರಂಭವಾಗದಿರುವ ಹಿನ್ನಲೆಯಲ್ಲಿ ಖಾಸಗಿ ಶಾಲೆಗಳ ಶಿಕ್ಷಕರ ಬದುಕು ಅತಂತ್ರವಾಗಿದ್ದು ಸರ್ಕಾರ ಖಾಸಗಿ ಶಾಲೆಗಳ ಶಿಕ್ಷಕರ ನೆರವಿಗೆ ಬರಬೇಕು ಎಂದು ಒತ್ತಾಯಿಸಿದ್ದಾರೆ.
ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿದ್ದವರ ಕುಟುಂಬಗಳು ಬದುಕು ಕಟ್ಟಿಕೊಳ್ಳಲು ಹೆಣಗಾಡುವಂತಾಗಿದೆ. ಆರ್ಥಿಕ ಮುಗ್ಗಟ್ಟಿನ ಜೊತೆಗೆ ಮುಂದಿನ ಬದುಕಿನ ಬಗ್ಗೆ ಆತಂಕಗೊಂಡಿರುವ ಖಾಸಗಿ ಶಾಲಾ ಶಿಕ್ಷಕರ ನೆರವಿಗೆ ಸರ್ಕಾರ ಮುಂದಾಗಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಹೆಸರು ಹೇಳಲು ಇಚ್ಚಿಸದ ಶಿಕ್ಷಕರೊಬ್ಬರು ಪತ್ರಿಕೆಗೆ ತಿಳಿಸಿದ್ದಾರೆ.
ಶಾಲೆಯ ಪ್ರವೇಶಾತಿ ಮತ್ತು ಶುಲ್ಕ ತೆಗೆದುಕೊಳ್ಳಲು ಪೋಷಕರಿಗೆ ಒತ್ತಾಯಿಸಬಾರದು ಎಂದು ಸರ್ಕಾರ ಆದೇಶಿಸಿದೆ. ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಿ ಶುಲ್ಕ ನೀಡದೇ ಹೋದರೆ ಶಾಲಾ ಆಡಳಿತ ಮಂಡಳಿ ತನ್ನ ಶಾಲೆಯ ಶಿಕ್ಷಕರಿಗೆ ವೇತನ ನೀಡಲು ಸಾಧ್ಯವಿಲ್ಲ. ಇದರಿಂಧಾಗಿ ಖಾಸಗಿ ಶಾಲಾ ಶಿಕ್ಷಕರ ಬದುಕು ಅತಂತ್ರವಾಗಿದ್ದು ಸರ್ಕಾರ ನೆರವಿಗೆ ಬರಬೇಕು ಎಂದು ಖಾಸಗಿ ಶಾಲೆಯ ಶಿಕ್ಷಕರು ಒತ್ತಾಯಿಸಿದ್ದಾರೆ.