ಮೂಡಿಗೆರೆ : ಗಣಪತಿ ವಿಸರ್ಜಿಸಿ ಹಿಂದಿರುಗುವಾಗ ವಿದ್ಯುತ್ ಸ್ಪರ್ಶಿಸಿ ಮೂವರು ಸಾವು…

109
firstsuddi

ಮೂಡಿಗೆರೆ : ಗಣಪತಿ ವಿಸರ್ಜಿಸಿ ಹಿಂದಿರುಗುವಾಗ ವಿದ್ಯುತ್ ಸ್ಪರ್ಶಿಸಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ತಾಲೂಕಿನ ಬಣಕಲ್ ಸಮೀಪದ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿದೆ.

ಟ್ರ್ಯಾಕ್ಟರ್ ನಲ್ಲಿದ್ದ ಪೆಂಡಾಲ್ ಗೆ ವಿದ್ಯುತ್ ತಂತಿ ತಗುಲಿ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ರಾಜು (47) ರಚನಾ (35) ಪಾರ್ವತಿ (26) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಆರು ಮಂದಿಯನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ವಿದ್ಯುತ್ ಶಾಕ್ ತಗುಲಿ ಗಂಭೀರ ಗಾಯಗೊಂಡ ಸಂಗೀತ ಹಾಗೂ ಪಲ್ಲವಿ ಎಂಬುವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ರವಾನಿಸಲಾಗಿದೆ. ಅದೃಷ್ಟವಶಾತ್ ಟ್ರ್ಯಾಕ್ಟರ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.