ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗುತ್ತಿಹಳ್ಳಿ ಗ್ರಾಮದ ಕಾಫಿ ತೋಟದಲ್ಲಿ ಕಾಡಾನೆಗಳು ಪ್ರತ್ಯಕ್ಷಗೊಂಡಿದ್ದು, ಎರಡು ಕಾಡಾನೆಗಳು ಕಾಫಿ, ಬಾಳೆ ಗಿಡಗಳನ್ನು ನಾಶಮಾಡಿದೆ ಎಂದು ತಿಳಿದು ಬಂದಿದ್ದು, ಕಾಡಾನೆಗಳು ಪದೇ ಪದೇ ನಾಡಿಗೆ ಬರುತ್ತಿರುವುದರಿಂದ ಸ್ಥಳೀಯ ಜನರಲ್ಲಿ ಆತಂಕ ಮೂಡಿಸಿದ್ದು, ಕಾಡಾನೆಗಳನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.









