ಮೂಡಿಗೆರೆ : ಚಾರ್ಮಾಡಿ ಘಾಟ್ ನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ವಾಹನ ಸಂಚಾರ ಬಂದ್…

651
firstsuddi

ಮೂಡಿಗೆರೆ : ಮಲೆನಾಡು ಭಾಗಗಳಲ್ಲಿ ಭಾರಿ ಮಳೆ ಹಿನ್ನೆಲೆ, ಚಾರ್ಮಾಡಿ ಘಾಟ್‍ನಲ್ಲಿ ಪದೇ ಪದೇ ಗುಡ್ಡ ಕುಸಿತ ಹಾಗೂ ಮರಗಳು ಧರೆಗೆ ಉರುಳುತ್ತಿರುವುದರಿಂದ ದಿನಾಂಕ 07/08/2019 ರಿಂದ 08/08/2019ರ ಮಧ್ಯ ರಾತ್ರಿವರೆಗೂ ಎರಡು ದಿನಗಳ ಕಾಲ ಎಲ್ಲಾ ರೀತಿಯ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಅವರು ಆದೇಶ ಹೊರಡಿಸಿದ್ದಾರೆ.