ಕೊಟ್ಟಿಗೆಹಾರ : ಚಾರ್ಮಾಡಿ ಘಾಟ್ ಮಾರ್ಗದಲ್ಲಿ ರಾತ್ರಿ ಸಮಯದಲ್ಲಿ ಲಘುವಾಹನ ಸಂಚಾರ ನಿರ್ಬಂಧ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಕರ್ನಾಟಕ ರಾಷ್ಟ್ರಸಮಿತಿ ಜಿಲ್ಲಾಧ್ಯಕ್ಷ ಮಗ್ಗಲಮಕ್ಕಿ ಗಣೇಶ್ ಮಾತನಾಡಿ ಮಳೆಗಾಲದಲ್ಲಿ ಅತಿಯಾದ ಮಳೆಯಿಂದ ಚಾರ್ಮಾಡಿ ಘಾಟ್‍ನಲ್ಲಿ ಗುಡ್ಡ ಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತದಿಂದ ರಾತ್ರಿ 7 ಗಂಟೆಯಿಂದ ಬೆಳಿಗ್ಗೆ 7 ಗಂಟೆವರೆಗೆ ಚಾರ್ಮಾಡಿ ಘಾಟ್‍ನಲ್ಲಿ ಲಘುವಾಹನ ಸಂಚಾರಕ್ಕೆ ನಿಷೇಧ ಏರಿತ್ತು. ಇದರಿಂದ ರಾತ್ರಿ ಸಂಚಾರ ನಿರ್ಬಂಧ ಮಾಹಿತಿ ಇಲ್ಲದೇ ಬರುವ ಕೆಲ ಪ್ರಯಾಣಿಕರು ಕೊಟ್ಟಿಗೆಹಾರದಲ್ಲಿ ವಾಹನದಲ್ಲೆ ರಾತ್ರಿ ಕಳೆದು ಬೆಳಿಗ್ಗೆ ಪ್ರಯಾಣ ಮುಂದುವರಿಸುತ್ತಿದ್ದರು. ಈಗ ಮಳೆ ಕಡಿಮೆಯಾಗಿರುವುದರಿಂದ ಚಾರ್ಮಾಡಿ ಘಾಟ್‍ನಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದರು.
Home ಸ್ಥಳಿಯ ಸುದ್ದಿ ಮೂಡಿಗೆರೆ : ಚಾರ್ಮಾಡಿ ಘಾಟ್ ಮಾರ್ಗದಲ್ಲಿ ರಾತ್ರಿ ವಾಹನ ಸಂಚಾರ ನಿರ್ಬಂಧ ತೆರವಿಗೆ ಸಾರ್ವಜನಿಕರ ಒತ್ತಾಯ…










