ಮೂಡಿಗೆರೆ : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದಿರುವ ಘಟನೆ ತಾಲ್ಲೂಕಿನ ಮುದ್ರೆಮನೆ ಬಳಿ ನಡೆದಿದೆ.ಕಾರಿನಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಮೂವರು ತೆರಳುತ್ತಿದ್ದರು ಎನ್ನಲಾಗಿದ್ದು ಅತಿ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಎಂ.ಜಿ.ಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.










