ಮೂಡಿಗೆರೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಹಳ್ಳಕ್ಕೆ ಬಿದ್ದು ಸ್ಥಳದಲ್ಲೇ ಮೂವರು ಮೃತಪಟ್ಟು, ಇಬ್ಬರಿಗೆ ಗಂಭಿರ ಗಾಯವಾಗಿರುವ ಘಟನೆ ತಾಲ್ಲೂಕಿನ ಬಡವನದಿಣ್ಣೆ ಗ್ರಾಮದ ಇಬ್ಬನಿ ಕೆಫೆ ಸಮೀಪದ ಕಿರು ಸೇತುವೆ ಬಳಿ ನಡೆದಿದೆ. ಪ್ರಕಾಶ್(61), ಯಶೋಧ(82), ಅನಿರುಧ್(24) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು. ಮೃತರು ಬೆಂಗಳೂರು ಮೂಲದವರು ಎನ್ನಲಾಗಿದ್ದು, ಇನ್ನೋವ ಕಾರಿನಲ್ಲಿ ಮಂಗಳೂರಿನಿಂದ-ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿ ಬಿದ್ದಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Home ಸ್ಥಳಿಯ ಸುದ್ದಿ ಮೂಡಿಗೆರೆ : ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು-ಮೂವರ ದುರ್ಮರಣ, ಇಬ್ಬರ ಸ್ಥಿತಿ ಗಂಭೀರ…










