ಮೂಡಿಗೆರೆ : ಚಾಲಕನ ನಿಯಂತ್ರಣ ತಪ್ಪಿ ತರಕಾರಿ ವಾಹನ ಪಲ್ಟಿ…

376
firstsuddi

ಕೊಟ್ಟಿಗೆಹಾರ : ಚಾಲಕನ ನಿಯಂತ್ರಣ ತಪ್ಪಿ ತರಕಾರಿ ವಾಹನವೊಂದು ಪಲ್ಟಿಯಾಗಿರುವ ಘಟನೆ ವಿಲ್ಲುಪುರಂ ಮಂಗಳೂರಿನ ಚಾರ್ಮಾಡಿ ಘಾಟ್ ಹೆದ್ದಾರಿಯ ಹತ್ತನೇ ತಿರುವಿನಲ್ಲಿ ಇಂದು ಮದ್ಯಾಹ್ನ ನಡೆದಿದೆ.
ಚಿಕ್ಕಮಗಳೂರಿನಿಂದ ಮಂಗಳೂರಿಗೆ ತರಕಾರಿ ತುಂಬಿಕೊಂಡು ಹೋಗುತ್ತಿದ್ದಾಗ ಚಾರ್ಮಾಡಿ ಘಾಟ್‍ನಲ್ಲಿ ವಾಹನ ಪಲ್ಟಿಯಾಗಿದ್ದು, ವಾಹನದಲ್ಲಿದ್ದ ಚಾಲಕ ಮತ್ತು ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು, ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.