ಮೂಡಿಗೆರೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.

245
firstsuddi

ಕೊಟ್ಟಿಗೆಹಾರ : ಕಳಸದಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರೊಂದು ಕೆಳಗೂರು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಕೆಳಗೂರು ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಲ್ಲಿಗೆ ಡಿಕ್ಕಿ ಹೊಡೆದು ರಸ್ತೆಗೆ ಕಾರು ಪಲ್ಟಿಯಾಗಿದೆ. ಕಾರಿನಲ್ಲಿ ಮಂಗಳೂರು ಮೂಲದ ನಾಲ್ವರು ಪ್ರಯಾಣಿಸುತ್ತಿದ್ದು, ಓರ್ವರಿಗೆ ಗಾಯವಾಗಿದ್ದು, ಅದೃಷ್ಟಾವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.