ಮೂಡಿಗೆರೆ : ಚಿತ್ರಕಲಾ ಸ್ಪರ್ಧೆಯಲ್ಲಿ ವಿದ್ಯಾರ್ಥಿ ಸುಶಾನ್ ರಾಜ್ಯಮಟ್ಟಕ್ಕೆ ಆಯ್ಕೆ…

585
firstsuddi

ಮೂಡಿಗೆರೆ : ಇತ್ತೀಚೆಗೆ ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ ನಡೆಸಲಾದ ಚಿತ್ರಕಲಾ ಸ್ಪರ್ಧೆಯಲ್ಲಿ ಬಣಕಲ್‍ನ ಶ್ರೀ ವಿದ್ಯಾಭಾರತಿ ಪ್ರಾಥಮಿಕ ಶಾಲೆಯ ಐದನೇ ತರಗತಿ ವಿದ್ಯಾರ್ಥಿ ಡಿ.ಎನ್.ಸುಶಾನ್ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ ಎಂದು ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಸಿ.ನಾಗರಾಜ್ ತಿಳಿಸಿದ್ದಾರೆ. ವಿದ್ಯಾರ್ಥಿ ಸುಶಾನ್ ಬಣಕಲ್ ಸಮೀಪದ ದಾಸರಹಳ್ಳಿಯ ನಾಗೇಶ್ ಮತ್ತು ಶಕುಂತಲಾ ದಂಪತಿಯ ಪುತ್ರನಾಗಿದ್ದು, ಇವನ ಉತ್ತಮ ಸಾಧನೆಗೆ ಶಾಲಾ ಶಿಕ್ಷಕರು, ಪೋಷಕರು, ಗ್ರಾಮಸ್ಥರು ಅಭಿನಂದಿಸಿದ್ದಾರೆ.