ಮೂಡಿಗೆರೆ : ತಾಲ್ಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ನಳಂದ ಕಾಲೇಜಿಗೆ ಪ್ರಥಮ ಬಹುಮಾನ…

196
firstsuddi

ಮೂಡಿಗೆರೆ : ಇತ್ತೀಚೆಗೆ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಪ್ಲಾಸ್ಟಿಕ್ ತ್ಯಾಜ್ಯ ನಿವಾರಣೆ ಮತ್ತು ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ನಿರ್ಮೂಲನೆ ವಿಷಯದ ಬಗ್ಗೆ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ನಳಂದ ಅಚಿರ್ವಸ್ ಅಸೆಂಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ನಿಧಿ ಸಿ.ಎಂ ಅವರಿಗೆ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಹಾಗೂ ಅನಿಷ ಆಂದ್ರಾದೆ ಅವರಿಗೆ ಹಿಂದಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದು, ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ವಿಜೇತರಿಗೆ ನಳಂದ ಸಂಸ್ಥೆಯ ನಿರ್ದೇಶಕರು, ಕಾರ್ಯದರ್ಶಿಗಳು, ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.