ಮೂಡಿಗೆರೆ : ನಿಡುವಾಳೆಯ ಶ್ರೀರಾಮೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ…

263
firstsuddi

ಮೂಡಿಗೆರೆ: ಬಾಳೂರು ಹೋಬಳಿ ನಿಡುವಾಳೆಯ ಶ್ರೀರಾಮೇಶ್ವರ ದೇವಸ್ಥಾನದಲ್ಲಿ ಕಾರ್ತಿಕ ಪೂಜಾ ಮಹೋತ್ಸವವು ವಿಜೃಂಭಣೆಯಿಂದ ನಡೆಯಿತು. ದೇವಸ್ಥಾನವನ್ನು ಹೂ ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.
ಸೋಮವಾರ ನಡೆದ ದೀಪೋತ್ಸವದಲ್ಲಿ ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಜಮಾಯಿಸಿ ಕಾರ್ತಿಕ ಮಹೋತ್ಸವದಲ್ಲಿ ಶೃದ್ದಾ ಭಕ್ತಿಯಿಂದ ಪಾಲ್ಗೊಂಡರು. ಕಾರ್ತಿಕ ದೀಪೋತ್ಸವಕ್ಕೆ ದೀಪ ಬೆಳಗಿಸುವುದರ ಮೂಲಕ ದೇವಸ್ಥಾನದ ಆಡಳಿತದಾರರಾದ ಶ್ವೇತಾ ಸುನಿಲ್ ಜೆ.ಗೌಡ ಉತ್ಸವಕ್ಕೆ ಚಾಲನೆ ನೀಡಿದರು. ದೇವಸ್ಥಾನದಲ್ಲಿ ಹಲವು ಪೂಜಾ ಕೈಂಕರ್ಯಗಳು ನಡೆದವು