ಮೂಡಿಗೆರೆ : ತಾಲೂಕಿನಾದ್ಯಂತ ನಾಲ್ಕು ದಿನದಿಂದ ಭಾರಿ ಮಳೆ ಸುರಿಯುತ್ತಿದ್ದು, ಗಾಳಿ ಮಳೆ ಅಬ್ಬರಕ್ಕೆ ಮನೆ ಕುಸಿದು ಬಿದ್ದು ಅಜ್ಜಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ದಾರದಹಳ್ಳಿ ಗ್ರಾಮದ ಹೇಮಾವತಿ ನಗರದಲ್ಲಿ ನಡೆದಿದೆ.
ಇಂದು ಮಧ್ಯಾಹ್ನ ಸುರಿದ ಭಾರಿ ಮಳೆಗೆ ಮನೆ ಕುಸಿದು ಬಿದ್ದಿದ್ದು ನಿಂಗಮ್ಮ ಎಂಬುವರಿಗೆ ಸೇರಿದ ಮನೆ ಇದಾಗಿದ್ದು ಮನೆಯಲ್ಲಿ ಅಜ್ಜಿ ಒಬ್ಬರೇ ವಾಸ ಮಾಡುತ್ತಿದ್ದರು. ಮನೆಯೊಳಗೆ ಸಿಲುಕಿಕೊಂಡ ಅಜ್ಜಿಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.










