ಮೂಡಿಗೆರೆ : ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ…

673

ಮೂಡಿಗೆರೆ : ಮಲೆನಾಡು ಭಾಗದ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ನಿನ್ನೆ ಸಂಜೆಯಿಂದ ಎಡೆಬಿಡದೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ತಾಲ್ಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬೈರಾಪುರ, ದಾರದಹಳ್ಳಿ, ಕುದುರೆಮುಖ ಹಾಗೂ ಶೃಂಗೇರಿ ತಾಲ್ಲೂಕಿನ ಕೆರೆಕಟ್ಟೆ ಸುತ್ತಮುತ್ತ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದ್ದು, ತುಂಗಾ ಭದ್ರಾ ಹಾಗೂ ಹೇಮಾವತಿ ನದಿಗಳ ಹರಿವಿನ ಮಟ್ಟ ಹೆಚ್ಚಳವಾಗಿದೆ.