ಮೂಡಿಗೆರೆ : ಸ್ವಿಫ್ಟ್ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ…

1178

ಮೂಡಿಗೆರೆ :ಬಿದಿರಹಳ್ಳಿ ದರ್ಗಾದ ಬಳಿ ಮಾರುತಿ ಸ್ವಿಫ್ಟ್ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದ್ದು.ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಬಿದಿರಹಳ್ಳಿ ಗ್ರಾಮದ ಬಳಿ ಸಾಗುತ್ತಿದ್ದಾಗ ಎದರುಗಡೆಯಿಂದ ಬರುತ್ತಿದ್ದ ವಾಹನವನ್ನು ಸಂಭಾಳಿಸುವ ನಿಟ್ಟಿನಲ್ಲಿ ಅಪಘಾತ ಸಂಭವಿಸಿದೆ. ಅಪಘಾತ ಸಂಭವಿಸಿದಾಗ ವಾತಾವರಣದಲ್ಲಿನ ವೈಪರಿತ್ಯದಿಂದಾಗಿ ಮಳೆ ಬೀಳುತ್ತಿದ್ದು, ಕಾರು ನಿಯಂತ್ರಣಕ್ಕೆ ಬಾರದೆ ಇದ್ದುದರಿಂದ ಆಯತಪ್ಪಿ ಪಕ್ಕದಲ್ಲಿಯೇ ಇದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಅಪಘಾತ ಸಂಭವಿಸಿದ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂ ಆಗಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಅಪಘಾತ ಸಂಭವಿಸಿದ ಕೂಡಲೇ, ಸ್ಥಳೀಯರು ಮತ್ತು ವಾಹನ ಸವಾರರು ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಕಾರಿನಲ್ಲಿದ್ದವರು ಬೆಂಗಳೂರಿನವರು ಎಂದು ತಿಳಿದುಬಂದಿದೆ. ಘಟನೆ ಮೂಡಿಗೆರೆ ಪೊಲೀಸ್ ಠಾಣಾ  ವ್ಯಾಪ್ತಿಯಲ್ಲಿ ನಡೆದಿದೆ.