ಮೂಡಿಗೆರೆ : ಸ್ಕೂಟಿ ಪಲ್ಟಿಯಾಗಿ ಬಿದ್ದು ಸವಾರ ಗಂಭೀರ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಕೊಟ್ಟಿಗೆಹಾರದ ದರ್ಬಾರ್ ಹೋಟೆಲ್ ಸಮೀಪ ನಡೆದಿದೆ.
ಗಾಯಗೊಂಡ ಸವಾರ ಬೇಲೂರು ಮೂಲದ ದರ್ಮೇಗೌಡ ಎಂದು ತಿಳಿದು ಬಂದಿದೆ. ಉಜಿರೆಯಲ್ಲಿದ್ದ ತನ್ನ ಸಂಬಂಧಿಕರ ಮನೆಗೆ ಹೋಗಿ ವಾಪಸ್ ಮನೆಗೆ ತೆರಳುವಾಗ ಈ ಘಟನೆ ನಡೆದಿದ್ದು, ಅಪಘಾತದಲ್ಲಿ ತಲೆ ಹಾಗೂ ಕೈಗೆ ಗಂಭೀರ ಗಾಯವಾಗಿದ್ದು, ಸ್ಥಳಿಯರು ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ್ದು, ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.










