ಮೂಡಿಗೆರೆ : ಮಲೆನಾಡು ಭಾಗಗಳಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಕಾಫಿ ಹಾಗೂ ಬಾಳೆ ಗಿಡಗಳನ್ನು ನಾಶ ಮಾಡಿರುವ ಘಟನೆ ತಾಲ್ಲೂಕಿನ ಗೋಣಿಬೀಡು ಸಮೀಪದ ಹೊಸಪುರ ಗ್ರಾಮದಲ್ಲಿ ನಡೆದಿದೆ. ಚಂದ್ರೇಗೌಡ, ಸುನೀಲ್ ಹಾಗೂ ಕುಮಾರಯ್ಯ ಎಂಬುವವರ ತೋಟಕ್ಕೆ ನುಗ್ಗಿದ ಕಾಡಾನೆ ಕಾಫಿ, ಅಡಿಕೆ, ಬಾಳೆ ಗಿಡಗಳನ್ನು ನಾಶ ಮಾಡಿದ್ದು, ಇದರಿಂದ ಸುಮಾರು 3ಲಕ್ಷಕ್ಕೂ ಹೆಚ್ಚು ನಷ್ಟವಾಗಿದ್ದು, ಸರ್ಕಾರ ಸೂಕ್ತ ಪರಿಹಾರ ಕೊಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










