ಮೂರು ದಿನದಲ್ಲಿ ಸಚಿವ ಸಂಪುಟ ವಿಸ್ತರಣೆ : ಬಿ.ಎಸ್.ಯಡಿಯೂರಪ್ಪ.

71
firstsuddi

ಬೆಂಗಳೂರು : ಇನ್ನು ಮೂರು ದಿನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದ್ದಾರೆ.

ದುಬೈ ಪ್ರವಾಸಕ್ಕೂ ಮುನ್ನ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ನಾಯಕರ ತೀರ್ಮಾನವೇ ಇದರಲ್ಲಿ ಅಂತಿಮವಾಗಿರಲಿದೆ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವಿಚಾರದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧವಾಗಿರುತ್ತೇವೆ ಎಂದರು. ನಮ್ಮ ಪಕ್ಷ ಇನ್ನಷ್ಟು ಬಲವಾಗಲಿದೆ. ನಮ್ಮ ಗುರಿ 150 ಸ್ಥಾನ ಗೆಲ್ಲೋದಾಗಿದೆ. ಪ್ರಧಾನಿಯವರಿಗೆ 150 ಕ್ಷೇತ್ರ ಗೆಲ್ಲುವ ಭರವಸೆ ಕೊಟ್ಟಿದ್ದೇವೆ. ಆ ಗುರಿ ಮುಟ್ಟಲು ರಾಜ್ಯ ಪ್ರವಾಸ ಮಾಡುತ್ತೇವೆ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನಾಳೆ ದುಬೈ ಬಸವ ಸಮಿತಿ ಬಸವ ಭೂಷಣ ಪ್ರಶಸ್ತಿ ಪ್ರದಾನ ಮಾಡಲಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಯಡಿಯೂರಪ್ಪ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಪ್ರಯಾಣ ಬೆಳೆಸಿದ್ದಾರೆ.