ಮೂರು ವರ್ಷಗಳ ನಂತರ ತಾಯ್ನಾಡಿಗೆ ಮರಳಿದ ನಟಿ ಪ್ರಿಯಾಂಕಾ ಚೋಪ್ರಾ…

87
firstsuddi

ಬಾಲಿವುಡ್ ಖ್ಯಾತ ನಟಿ ಪ್ರಿಯಾಂಕಾ ಚೋಪ್ರಾ ಅವರು ಮದುವೆಯಾದ ಬಳಿಕ ಪತಿ ನಿಕ್ ಜೋನಸ್ ಜೊತೆ ಅಮೆರಿಕದಲ್ಲಿ ನೆಲೆಸಿದ್ದರು. ಇದೀಗ ಬರೋಬ್ಬರಿ ಮೂರು ವರ್ಷಗಳ ಬಳಿಕ ತಾಯ್ನಾಡಿಗೆ ಬಂದಿಳಿದಿದ್ದಾರೆ.

ಮಗಳ ಜೊತೆ ಭಾರತಕ್ಕೆ ಬಂದಿಳಿದಿರುವ ಪ್ರಿಯಾಂಕಾ, ಅಂತಿಮವಾಗಿ ಮನೆಗೆ ಹೋಗುತ್ತಿದ್ದೇನೆ ಎಂದು ಮಗಳೊಂದಿಗೆ ಇರುವ ಫೋಟೋವನ್ನು ಅವರು ಶೇರ್ ಮಾಡಿದ್ದಾರೆ.

ನಟಿ ಪ್ರಿಯಾಂಕಾ ಚೋಪ್ರಾ ಬಾಲಿವುಡ್ ಗೆ ಪಾದಾರ್ಪಣೆ ಮಾಡಿ ಖ್ಯಾತಿ ಪಡೆದಿದ್ದರು. ಬಳಿಕ ಕ್ವಾಂಟಿಕೋ ಚಿತ್ರದ ಮೂಲಕ ಹಾಲಿವುಡ್ ಗೆ ಪ್ರವೇಶಿಸಿದ್ದರು. ಗಾಯಕ ನಿಕ್ ಜೋನಸ್ ಜೊತೆ ಪ್ರಿಯಾಂಕಾ ಮದುವೆಯಾದ ನಂತರ ಅಮೆರಿಕಕ್ಕೆ ಹಾರಿದ್ದರು. ವರ್ಷದ ಆರಂಭದಲ್ಲಿ ನಟಿ ಬಾಡಿಗೆ ತಾಯ್ತನದ ಮೂಲಕ ಪುತ್ರಿಯನ್ನು ಪಡೆದುಕೊಂಡಿದ್ದಾರೆ.