ದಾವಣಗೆರೆ : ಮೂರು ವರ್ಷದ ಮಗುವಿನೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹರಿಹರ ತಾಲ್ಲೂಕಿನ ಬನ್ನಿಕೋಡು ಗ್ರಾಮದಲ್ಲಿ ನಡೆದಿದ್ದು, ಆತ್ಮಹತ್ಯೆಗೆ ಕೌಟುಂಬಿಕ ಕಲಹ ಶಂಕೆ ವ್ಯಕ್ತವಾಗಿದೆ.
ಮೃತರನ್ನು ಹರ್ಷಿತಾ(3) ಹಾಗೂ ಚಂದ್ರಮ್ಮ (25) ಎಂದು ಗುರುತಿಸಲಾಗಿದೆ. ಮೃತರಾದ ಚಂದ್ರಮ್ಮನ ಪತಿ ಮಂಜಪ್ಪ ಡಿ.ಆರ್ ಪೊಲೀಸ್ ಕಾನ್ಸ್ ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದು, ಇಂದು ಬೆಳಗ್ಗೆ ಕೆಲಸ ಮುಗಿಸಿ ಮನೆಗೆ ಬಂದಾಗ ಪತ್ನಿ ಹಾಗೂ ಮಗು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.
ಕೆಲ ದಿನಗಳ ಹಿಂದೆ ಪೊಲೀಸ್ ಕಾನ್ಸ್ ಟೇಬಲ್ ಮಂಜಪ್ಪ ಹಾಗೂ ಪತ್ನಿ ಚಂದ್ರಮ್ಮನ ನಡುವೆ ಜಗಳ ನಡೆದಿತ್ತು ಎನ್ನಲಾಗಿದ್ದು, ಇದೇ ಆಕೆಯ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.










