ಮೂವರು ಶಾಸಕರನ್ನು ಅನರ್ಹಗೊಳಿಸಿದ ಸ್ಪೀಕರ್ ರಮೇಶ್ ಕುಮಾರ್…

292
firstsuddi

ಬೆಂಗಳೂರು : ರಾಜೀನಾಮೆ ನೀಡಿ ಮುಂಬೈಗೆ ತೆರಳಿರುವ ಅತೃಪ್ತ ಶಾಸಕರಲ್ಲಿ ಮೂವರು ಶಾಸಕರನ್ನು ಅನರ್ಹಗೊಳಿಸುವ ಮೂಲಕ ಸ್ಪೀಕರ್ ರಮೇಶ್ ಕುಮಾರ್ ಅವರು ಅತೃಪ್ತ ಶಾಸಕರಿಗೆ ಶಾಕ್ ನೀಡಿದ್ದು, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ರಾಣೆಬೆನ್ನೂರು ಶಾಸಕ ಆರ್.ಶಂಕರ್ ಹಾಗೂ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ. ಅನರ್ಹಗೊಂಡ ಶಾಸಕರು 3ವರ್ಷ 10ತಿಂಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಆದೇಶ  ಹೊರಡಿಸಿದ್ದಾರೆ.