ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ಅಭಿಮಾನಿ ರವಿ ಎಂಬಾತ ಬಿಎಸ್ ವೈ ರಾಜೀನಾಮೆ ಕೊಟ್ಟ ಹಿನ್ನಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದನು. ಇಂದು ಮೃತ ಅಭಿಮಾನಿ ಮನೆಗೆ ಬಿಎಸ್ ವೈ ಭೇಟಿ ನೀಡಿ ರವಿ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ನೀಡಿದ್ದು, ಇನ್ನು 5 ಲಕ್ಷ ರೂಪಾಯಿ ಹಣವನ್ನು ಕಳುಹಿಸುತ್ತೇನೆ ಮನೆಯನ್ನು ಕಟ್ಟಿಸಿಕೊಳ್ಳಿ ಎಂದು ಹೇಳಿ ಅಭಿಮಾನಿ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.










