ಚಿತ್ರದುರ್ಗ : ಹಿರಿಯೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ಡಿ. ಸುಧಾಕರ್ ಅವರ ಸಹೋದರ ಡಿ.ಮಹವೀರ್ ಜೈನ್(73) ಮೆಟ್ಟಿಲಿನಿಂದ ಇಳಿಯುವಾಗ ಕಾಲು ಜಾರಿಬಿದ್ದು ಸಾವನ್ನಪ್ಪಿದ್ದಾರೆ.
ಜಿಲ್ಲೆಯ ಚಳ್ಳಕೆರೆ ನಗರದಲ್ಲಿರುವ ಜೈನ್ ಮಂದಿರದಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ಮೆಟ್ಟಿಲು ಇಳಿಯುವಾಗ ಮಹವೀರ್ ಜೈನ್ ಜಾರಿಬಿದ್ದಿದ್ದರು. ತಕ್ಷಣ ಅವರನ್ನು ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಡಿ.ಮಹಾವೀರ್ ಜೈನ್ ಸಾವನ್ನಪ್ಪಿದ್ದಾರೆ. ಮೆಟ್ಟಿಲಿನಿಂದ ಕಾಲುಜಾರಿ ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.










