ಮೆಟ್ರೋ ಸ್ಟೇಷನ್​​ನಲ್ಲಿ ಸೆಕ್ಯೂರಿಟಿ ಸಿಬ್ಬಂದಿಯಿಂದ ಅಸಭ್ಯ ವರ್ತನೆ ಆರೋಪ- ದೂರು ದಾಖಲಿಸಿದ ಮಹಿಳೆ…

39
firstsuddi

ಬೆಂಗಳೂರು: ಜಾಲಹಳ್ಳಿ ಮೆಟ್ರೋ ಸ್ಟೇಷನ್​​ನಲ್ಲಿ ಸೆಕ್ಯೂರಿಟಿ ಸಿಬ್ಬಂದಿಯೊಬ್ಬರು ಅಸಭ್ಯ ವರ್ತನೆ ತೋರಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದೀಗ ಚರ್ಚೆಗೆ ಗ್ರಾಸವಾಗಿದೆ. ಮಹಿಳೆಯ ಮುಂದೆ ದುರ್ವರ್ತನೆ ತೋರಿದ್ದು, ಈ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ಘಟನೆ ಕುರಿತು ಮೆಟ್ರೋ ಮೇಲಾಧಿಕಾರಿಗಳಿಗೆ ಮಹಿಳೆ ಜಾಲತಾಣ ಮತ್ತು ಇಮೇಲ್ ಮೂಲಕ ಇ-ಮೇಲ್ ದೂರು ನೀಡಿದ್ದಾರೆ. ಘಟನೆ ನಂತರ ದೂರು ನೀಡಿದರೂ ಮೇಲಾಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಮುಂದೆ ಆಗುವ ಅನಾಹುತಗಳಿಗೆ ಮೆಟ್ರೋ ಅಧಿಕಾರಿಗಳೇ ಹೊಣೆ ಎಂದು ಮಹಿಳೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ನಮ್ಮ ಮೆಟ್ರೋ ಅಧಿಕಾರಿಗಳು, ಮಹಿಳೆಯ ದೂರನ್ನು ಗಂಭೀರವಾಗಿ ಪರಿಗಣಿಸಿ ಆಂತರಿಕ ತನಿಖೆಯನ್ನು ನಡೆಸಲಾಗುತ್ತಿದೆ. ಮೇಲ್ನೋಟಕ್ಕೆ ಸೆಕ್ಯೂರಿಟಿ ಸಿಬ್ಬಂದಿ ಕೆಲ ಅಂಗವೈಕಲ್ಯಗಳನ್ನು ಹೊಂದಿದ್ದು ಈ ಕಾರಣ ಮಹಿಳೆಗೆ ಅಸಭ್ಯ ವರ್ತನೆ ಎಂದು ತೋರಿರುವ ಸಾಧ್ಯತೆ ಇದೆ. ಇನ್ನೂ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಿದ್ದೇವೆ. ಮಹಿಳೆಯರ ಸುರಕ್ಷತೆ ನಮ್ಮ ಮೆಟ್ರೋ ಸಂಸ್ಥೆಯ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದ್ದಾರೆ.