ಮೈಸೂರು : ಮೆಡಿಕಲ್ ಶಾಪ್‍ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ಮೌಲ್ಯದ ಔಷಧ ಬೆಂಕಿಗಾಹುತಿಯಾಗಿರುವ ಘಟನೆ ಮೈಸೂರಿನ ಕುವೆಂಪು ನಗರದಲ್ಲಿರುವ ಮೆಗಾ ಮೆಡಿಕಲ್ ಶಾಪ್‍ನಲ್ಲಿ ನಡೆದಿದೆ. ಇಂದು ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಮೆಡಿಕಲ್ ಶಾಪ್‍ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಎರಡು ಮಹಡಿ ಕಟ್ಟಡದ ಔಷಧಿ ಮಳಿಗೆ ಸುಟ್ಟು ಹೋಗಿದ್ದು, ಲಕ್ಷಾಂತರ ಮೌಲ್ಯದ ಔಷಧಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ವಿಷ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.










