ಮೇ 10ರ ಒಳಗಡೆ ಸಿಎಂ ಬದಲಾವಣೆ ಆಗಬಹುದು : ಭವಿಷ್ಯ ನುಡಿದ ಯತ್ನಾಳ್.

60
firstsuddi

ವಿಜಯಪುರ : ಮೇ 10ರ ಒಳಗಡೆ ಸಿಎಂ ಬದಲಾವಣೆ ಆಗಬಹುದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ.

ಜಿಲ್ಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಮಿತ್ ಶಾ ಕರ್ನಾಟಕಕ್ಕೆ ಆಗಮಿಸಿದ್ದಾರೆ. ರಾಜ್ಯ ಹಾಗೂ ಪಾರ್ಟಿ ಹಿತದೃಷ್ಟಿಯಿಂದ ಪಕ್ಷ ಒಳ್ಳೆಯ ನಿರ್ಣಯ ತೆಗೆದುಕೊಳ್ಳುತ್ತದೆ. ಪ್ರಧಾನಿ ಅಂತಿಮ ತೀರ್ಮಾನ ಮಾಡುತ್ತಾರೆ ಎಂದರು.

ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯಗೆ ಬಿಜೆಪಿ ಭಯ ಇದೆ. ಸಿಎಂ ಬದಲಾವಣೆಯಾದ್ರೆ ಒಬ್ಬರಿಗೆ ಜೈಲಿಗೆ ಹೋಗುವ ಭಯವಿದೆ. ಇನ್ನೊಬ್ಬರಿಗೆ ಸಿಎಂ ಆಗಲ್ಲ ಎನ್ನುವ ಭಯ ಕಾಡುತ್ತಿದೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.