ಹುಬ್ಬಳ್ಳಿ : ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಮೇ 23ಕ್ಕೆ ಫಲಿತಾಂಶ ಬಂದ ಬಳಿಕ ಸಿದ್ದರಾಮಯ್ಯ ಅವರು ಇಟ್ಟಿರುವ ಟೈಮ್ ಬಾಂಬ್ ಸ್ಪೋಟವಾಗುತ್ತದೆ. ಮಂಡ್ಯ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಅವರು ಸ್ಪರ್ಧಿಸುವಲ್ಲಿ ಸಿದ್ದರಾಮಯ್ಯ ಅವರ ಪಾತ್ರವೂ ಇದೆ. ಆದರೆ ಸುಮ್ಮನೆ ನಾನೇನು ಹೇಳಿಲ್ಲ ಎಂದು ಹೇಳುತ್ತಿದ್ದಾರೆ. ಮಾಜಿ ಸಚಿವ ಚಲುವರಾಯಸ್ವಾಮಿ ಅವರು ಸೇರಿದಂತೆ ಹಲವು ಶಾಸಕರು ಸುಮಲತಾ ಅಂಬರೀಶ್ ಅವರ ಪರವಾಗಿ ಕೆಲಸ ಮಾಡಿದ್ದು, ಸುಮಲತಾ ಅವರಿಗೆ ಮತ ಹಾಕಿರುವುದಾಗಿ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಈ ಎಲ್ಲಾ ಕೆಲಸಗಳ ಹಿಂದೆ ಇರುವವರು ಸಿದ್ದರಾಮಯ್ಯ ಅವರು ಮಾತ್ರ ಎಂದು ಹೇಳಿದರು.










