ಮೇ ಮೂರನೇ ವಾರ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಪ್ರಕಟ : ಸಚಿವ ನಾಗೇಶ್.

62
firstsuddi

ಬೆಂಗಳೂರು : ಮೇ ಮೂರನೇ ವಾರ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಮೌಲ್ಯಮಾಪನ ಪ್ರಕ್ರಿಯೆ ಮುಕ್ತಾಯವಾಗಿದೆ. ಫಲಿತಾಂಶದ ತಯಾರಿ ಮಾಡಲಾಗುತ್ತಿದೆ. ಮೂರನೇ ವಾರ ಫಲಿತಾಂಶ ಪ್ರಕಟ ಮಾಡುತ್ತೇವೆ ಎಂದು ತಿಳಿಸಿದರು.

ಮೇ 16 ರಿಂದಲೇ ಶಾಲೆಗಳು ಪ್ರಾರಂಭವಾಗಲಿವೆ. ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ. ಎರಡು ವರ್ಷ ಕೊರೊನಾದಿಂದ ಮಕ್ಕಳಿಗೆ ಸರಿಯಾಗಿ ಶಿಕ್ಷಣ ಸಿಕ್ಕಿಲ್ಲ. ಹೀಗಾಗಿ ಕಲಿಕಾ ಚೇತರಿಕೆ ಕಾರ್ಯಕ್ರಮ ಅನುಷ್ಠಾನ ಮಾಡ್ತಿದ್ದೇವೆ. ಮುಖ್ಯಮಂತ್ರಿಗಳು ತುಮಕೂರಿನಲ್ಲಿ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಇದೇ ಮೇ 16 ಕ್ಕೆ ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು.

ಎಂಎಲ್ ಸಿಗಳು, ಸಭಾಪತಿಗಳು, ಎಂಎಲ್ ಎಗಳು ಪತ್ರ ಬರೆದು ಹೆಚ್ಚು ಬಿಸಿಲು ಇರುತ್ತೆ ಶಾಲೆ ಪ್ರಾರಂಭ ಮುಂದಕ್ಕೆ ಹಾಕಿ ಅಂತ ಮನವಿ ಮಾಡಿದ್ದಾರೆ. ಆದರೆ ನಾವು ಹವಾಮಾನ ಇಲಾಖೆ ವರದಿ ಪಡೆದಿದ್ದೇವೆ. ಪ್ರತಿ ವರ್ಷದಂತೆ ಈ ವರ್ಷವೂ ಅದೇ ಪ್ರಮಾಣದಲ್ಲಿ ಬಿಸಿಲು ಇರಲಿದೆ. ಹೀಗಾಗಿ ಯಾವುದೇ ತೊಂದರೆ ಆಗುವುದಿಲ್ಲ ಎಂದು ಹೇಳಿದರು.