ಬೆಂಗಳೂರು : ಮೇಕೆದಾಟು ಯೋಜನೆ ವಿರೋಧಿಸಿ ಧರಣಿ ನಡೆಸುತ್ತಿರುವ ಕರ್ನಾಟಕ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಗ್ಗೆ ಪ್ರತ್ರಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಅಣ್ಣಾಮಲೈ ಪ್ರತಿಭಟನೆಗೆ ಐ ಡೋಂಟ್ ಕೇರ್. ಅವನನ್ನು ಅಷ್ಟು ದೊಡ್ಡ ವ್ಯಕ್ತಿ ಮಾಡುವ ಅವಶ್ಯಕತೆಯಿಲ್ಲ ಎಂದು ಗುಡುಗಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆ ವಿರೋಧಿಸಿ ಅಣ್ಣಾಮಲೈ ಧರಣಿ ನಡೆಸುತ್ತಿರುವುದು ರಾಜಕೀಯ ಪ್ರೇರಿತ. ಹೆಚ್ಚುವರಿ ನೀರು ಸಂಗ್ರಹಿಸಲು ಮೇಕೆದಾಟು ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಬೆಂಗಳೂರಿಗೆ ನೀರು ಪೂರೈಸುವುದಕ್ಕೆ ಸಂಗ್ರಹಿಸಲಾಗುತ್ತಿದೆ. ಗೊತ್ತಿದ್ದೂ ಪ್ರತಿಭಟನೆ ಮಾಡಿದ್ರೆ ಅದು ರಾಜಕೀಯ ಪ್ರೇರಿತ ಆಗುತ್ತದೆ. ನಾವೂ ಅದನ್ನು ರಾಜಕೀಯ ಪ್ರೇರಿತ ಮಾಡುವುದು ಬೇಡ ಎಂದು ಬೊಮ್ಮಾಯಿ ಹೇಳಿದ್ದಾರೆ.
ಈ ಹಿಂದೆಯೂ ಸಿಎಂ ಬೊಮ್ಮಾಯಿ ದೆಹಲಿಯಲ್ಲಿ ಈ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದರು. ಅಣ್ಣಾಮಲೈ ಉಪವಾಸ ಬೇಕಾದ್ರೂ ಮಾಡಲಿ, ಊಟ ಬೇಕಾದ್ರು ಮಾಡಲಿ. ಮೇಕೆದಾಟು ಡ್ಯಾಂ ನಿರ್ಮಾಣ ಮಾಡಲು ನಮಗೆ ಹಕ್ಕಿದೆ. ಮೇಕೆದಾಟು ಯೋಜನೆ ಮಾಡೇ ಮಾಡುತ್ತೇವೆ ಎಂದು ಹೇಳಿದ್ದರು.










