ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಬ್ಯಾಂಕ್‍ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ನೌಕರ…

131
firstsuddi

ಬಳ್ಳಾರಿ : ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಬ್ಯಾಂಕ್‍ನಲ್ಲಿಯೇ ವಿಷ ಸೇವಿಸಿ ನೌಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹೊಸಪೇಟೆಯ ಬಳ್ಳಾರಿ ಸರ್ಕಲ್‍ನಲ್ಲಿರುವ ಈಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‍ನಲ್ಲಿ ನಡೆದಿದೆ. ಮಹೇಶ್(28) ಆತ್ಮಹತ್ಯೆಗೆ ಶರಣಾದ ನೌಕರ ಎಂದು ಗುರುತಿಸಲಾಗಿದೆ. ಹೊಸಪೇಟೆ ಶಾಖೆಯ ಈಕ್ವಿಟಾಸ್ ಸ್ಮಾಲ್ ಫೈನಾನ್ಸ್ ಬ್ಯಾಂಕ್‍ನಲ್ಲಿ ಲೀಗಲ್ ಅಡ್ವೈಸರ್ ಆಗಿ ಕೆಲಸ ಮಾಡುತ್ತಿದ್ದ ಮಹೇಶ್ ಅವರಿಗೆ ಸರಿಯಾದ ದಾಖಲೆಗಳು ಇಲ್ಲದಿದ್ದರೂ ಲೋನ್ ನೀಡುವಂತೆ ಮೇಲಾಧಿಕಾರಿಗಳಿಂದ ಒತ್ತಡ ಹೇರಲಾಗುತ್ತಿತ್ತು ಎನ್ನಲಾಗಿದ್ದು, ಇದರಿಂದ ಬೇಸತ್ತು ಲೈವ್ ವೀಡಿಯೋ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.