ಮೈತ್ರಿ ಸರ್ಕಾರ ಪತನವಾದ ಬಳಿಕ ನಾವ್ಯಾಕೆ ಬಿಜೆಪಿಗೆ ಹೋಗಲಿಲ್ಲ ಎಂದು ಅನಿಸುತ್ತಿತ್ತು : ಶಾಸಕ ಸುರೇಶ್ ಗೌಡ.

419
firstsuddi

ಮಂಡ್ಯ : ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ಶಾಸಕ ಸುರೇಶ್ ಗೌಡ ಅವರು, ಅತೃಪ್ತ ಶಾಸಕರನ್ನು ಅನರ್ಹ ಮಾಡಿದ ಒಂದು ಗಂಟೆಯಲ್ಲೇ ಸುಪ್ರೀಂ ಕೋರ್ಟ್‍ನಿಂದ ತಡೆ ಕೊಡಿಸುವುದಾಗಿ ಹೇಳಿದ್ದರು ಆದರೆ 24 ದಿನವಾದರೂ ತಡೆ ಸಿಕ್ಕಿಲ್ಲ. ಮೈತ್ರಿ ಸರ್ಕಾರ ಪತನವಾದ ಬಳಿಕ ನಾವ್ಯಾಕೆ ಬಿಜೆಪಿಗೆ ಹೋಗಲಿಲ್ಲ ಎಂದು ಅನಿಸುತ್ತಿತ್ತು. ಆದರೆ ಈಗಾ ಅನರ್ಹ ಶಾಸಕರ ಬಗ್ಗೆ ಯೋಚನೆ ಮಾಡಿದರೆ ನಾವು ತೆಗೆದುಕೊಂಡ ನಿರ್ಧಾರವೇ ಸರಿ ಎಂದೆನಿಸುತ್ತಿದೆ. ಈ ವೇಳೆ ನಿಮ್ಮನ್ನು ಬಿಜೆಪಿಗೆ ಸೇರುವಂತೆ ಕರೆದಿದ್ದರ ಎಂಬ ಪ್ರಶ್ನೆಗೆ ಉತ್ತರಿಸಿದ್ದು, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರನ್ನೇ ಬಿಜೆಪಿಗೆ ಕರೆದಿದ್ದರು ಇನ್ನು ನನ್ನನ್ನು ಕರೆಯದೇ ಬಿಡುತ್ತಾರ. ಆದರೆ ಈಗಿನ ರಾಜಕೀಯ ಪರಿಸ್ಥಿತಿ ನೋಡಿದರೆ ಮಧ್ಯಂತರ ಚುನಾವಣೆಗೆ ಸಿದ್ದರಾಗುವುದು ಒಳ್ಳೆಯದು. ಅಲ್ಲದೇ ಈಗಾಗಲೇ ನಮ್ಮ ಪಕ್ಷದ ವರಿಷ್ಠರು ಮಧ್ಯಂತರ ಚುನಾವಣೆಗೆ ಸಿದ್ದರಾಗುವಂತೆ ಸೂಚನೆ ನೀಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಹೆಚ್.ಡಿ. ದೇವೇಗೌಡ ಹಾಗೂ ನಿಖಿಲ್ ಕುಮಾರಸ್ವಾಮಿ ಅವರ ಸೋಲಿಗೆ ಸಿದ್ದರಾಮಯ್ಯ ಅವರೇ ಕಾರಣ ಎಂಬ ಹೆಚ್.ಡಿ. ದೇವೇಗೌಡ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ ಅವರು, ಅಂಗೈಯಲ್ಲಿರುವ ಹುಣ್ಣಿಗೆ ಕನ್ನಡಿ ಯಾಕೆ ಬೇಕು. ಅದು ಸತ್ಯ ಮೈತ್ರಿ ಸರ್ಕಾರ ರಚನೆ ಆಗುವ ಸಂದರ್ಭದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ಬೇಡ ಎಂದು ನಾನು ಮೊದಲೇ ಪಕ್ಷದ ವರಿಷ್ಠರಿಗೆ ತಿಳಿಸಿದ್ದೆ. ಆದರೆ ಜಾತ್ಯಾತೀತ ತತ್ವವನ್ನು ಆಧರಿಸಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ತೀರ್ಮಾನ ಮಾಡಿಕೊಂಡಿದ್ದರು. ಈಗ ನಾನು ಹೇಳಿದ್ದೆ ಸರಿ ಎಂದು ಪಕ್ಷದ ವರಿಷ್ಠರಿಗೆ ಅನಿಸಿರುತ್ತದೆ ಎಂದು ಹೇಳಿದರು.