ಮೈರೋಲ್ ಹಣ್ಣೆಂದು ಕಾಡು ಹಣ್ಣಿನ ಶರಬತ್ತು ಸೇವಿಸಿ ಮಹಿಳೆ ಸಾವು…

74
firstsuddi

ಸುಳ್ಯ: ಕಾಡಿನಲ್ಲಿ ಸಿಗುವ ಯಾವುದೋ (ಮೈರೋಲ್ ಹಣ್ಣು) ಹಣ್ಣನ್ನು ಸೇವಿಸಬಹುದಾದ ಹಣ್ಣು ಎಂದು ಭಾವಿಸಿ ಮನೆಗೆ ತಂದು ಶರಬತ್ತು ಮಾಡಿ ಕುಡಿದ ಮಹಿಳೆಯೊಬ್ಬರು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ.

ಅಮರಪಡ್ನೂರು ಗ್ರಾಮದ ಕುಳ್ಳಾಜೆ ನಿವಾಸಿ ಲೀಲಾವತಿ(35) ಮೃತಪಟ್ಟವರು. ಇವರ ತಂದೆ ಲೋಕಯ್ಯ ನಾಯ್ಕ ಕೂಡಾ ಹಣ್ಣಿನ ಶರಬತ್ತು ಕುಡಿದು ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.

ಲೀಲಾವತಿ ಹಾಗೂ ಲೋಕಯ್ಯ ನಾಯ್ಕ ಒಂದು ವಾರದ ಹಿಂದೆ ಮೈರೋಳ್ ಹಣ್ಣಿನ ರಸ ತೆಗೆದು ಶರಬತ್ತು ಮಾಡಿ ಕುಡಿದಿದ್ದರು ಎನ್ನಲಾಗಿದೆ. ಪರಿಣಾಮವಾಗಿ ತಂದೆ ಮಗಳಿಬ್ಬರೂ ಅಸ್ವಸ್ಥಗೊಂಡಿದ್ದರು. ಈ ಪೈಕಿ ವಾಂತಿ, ಭೇದಿ ಕಾಣಿಸಿಕೊಂಡಿದ್ದ ಲೀಲಾವತಿಯನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಸ್ವಸ್ಥತೆ ತೀವ್ರಗೊಂಡ ಹಿನ್ನಲೆಯಲ್ಲಿ ಸೋಮವಾರ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.