ಮೈಸೂರು : ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವ ಪೈಶಾಚಿಕ ಘಟನೆಯೊಂದು ಕೆ.ಆರ್. ಆಸ್ಪತ್ರೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ರಾತ್ರಿ ವೇಳೆ ಕಿಟಕಿ ಗ್ರಿಲ್ ಕಿತ್ತು ಒಳ ನುಗ್ಗಿದ ಕಾಮುಕ ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದ. ಈ ಬಗ್ಗೆ ಬುದ್ಧಿಮಾಂದ್ಯ ಮಹಿಳೆಯ ಸಂಬಂಧಿಕರು ವಾರದ ಹಿಂದೆಯೇ ವೈದ್ಯರಿಗೆ ಮಾಹಿತಿ ನೀಡಿದರೂ, ವೈದ್ಯರು ಕ್ರಮ ಕೈಗೊಂಡಿಲ್ಲ. ಅತ್ಯಾಚಾರ ಪ್ರಕರಣ ಮುಚ್ಚಿ ಹಾಕಲು ಕೆ.ಆರ್. ಆಸ್ಪತ್ರೆ ವೈದ್ಯರು ಯತ್ನಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಮಾಹಿತಿ ನೀಡಿದ ಮಹಿಳೆಗೆ ಹಲ್ಲೆ ಮಾಡಿ ಬಾಯಿ ಬಿಡದಂತೆ ಆಸ್ಪತ್ರೆ ಸಿಬ್ಬಂದಿ ಬೆದರಿಕೆ ಹಾಕಿದ್ದಾರೆ ಎನ್ನಲಾಗ್ತಿದೆ.
ಮಾನವ ಹಕ್ಕುಗಳ ಸೇವಾ ಸಮಿತಿಯಿಂದ ಈ ಪ್ರಕರಣ ಬೆಳಕಿಗೆ ಬಂದಿದ್ದು, ಮಾನವ ಹಕ್ಕುಗಳ ಸೇವಾ ಸಮಿತಿ ನೀಡಿದ ಮಾಹಿತಿಯಿಂದ ಪೊಲೀಸರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಅಮಾನವೀಯ ಕೃತ್ಯದ ಬಗ್ಗೆ ತಿಳಿದು ಅಕ್ಕಪಕ್ಕದ ವಾರ್ಡ್ ನ ರೋಗಿಗಳು ಬೆಚ್ಚಿಬಿದ್ದಿದ್ದಾರೆ.










